Oplus_0

ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪಿ. ರಾಜೀವ್

ನಾಗಾವಿ ಎಕ್ಸಪ್ರೆಸ್

ಯಾದಗಿರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಹೇಳಿದರು.

ಜಿಲ್ಲಾ‌ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ ಕೆಲಸ ಕಾರ್ಯಗಳು ಆಗುತ್ತಿಲ್ಲ, ತೆಗ್ಗು ಮುಚ್ಚಲು ಕೂಡ ಸರ್ಕಾರದಲ್ಲಿ ಹಣವಿಲ್ಲ, ದಿನಕ್ಕೊಂದು ವಿವಾದಗಳನ್ನು ಸೃಷ್ಟಿ ಮಾಡುತ್ತಾ ರಾಜ್ಯದಲ್ಲಿ ಗೊಂದಲದ ಹಾಗೂ ಅಶಾಂತಿ ವಾತಾವರಣ ನಿರ್ಮಿಸಿದ್ದಾರೆ ಅಲ್ಲದೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ಯುವ ಮುಖಂಡರಾದ ಮಹೇಶರೆಡ್ಡಿ ಮುದ್ನಾಳ, ಹಿರಿಯ ಮುಖಂಡ ದೇವಿಂದ್ರನಾಥ ನಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪರಶುರಾಮ ಕುರಕುಂದಿ ಹಾಗೂ ಮೇಲಪ್ಪ ಗುಳಗಿ, ನಗರ ಮಂಡಲ್ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಕಟ್ಟಿಮನಿ, ಮತ್ತು ಜಿಲ್ಲಾ ಚುನಾವಣಾ ಹಾಗೂ ಸಹ- ಚುನಾವಣಾ ಅಧಿಕಾರಿ ತಂಡ, ಜಿಲ್ಲಾ, ಮಂಡಲ ಸದಸ್ಯತಾ ಅಭಿಯಾನ ಹಾಗೂ ಸಕ್ರೀಯ ಸದಸ್ಯತಾ ಅಭಿಯಾನ ತಂಡ, ಮಂಡಲ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಮಂಡಲ ಸಂಘಟನಾ ಪರ್ವ ಸಹಯೋಗಿ ತಂಡದ ಸದಸ್ಯರು ಮತ್ತು ಪಕ್ಷದ ಇತರ ಪ್ರಮುಖರು, ಹಿರಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಜಿಲ್ಲಾ ಮಟ್ಟದ ಬಿಜೆಪಿ ಸದಸ್ಯತ್ವ ಅಭಿಯಾನ ಹಾಗೂ ಜಿಲ್ಲಾ ಸಕ್ರೀಯ ಸದಸ್ಯತ್ವ ಅಭಿಯಾನದ ಪರಿಶೀಲನಾ ಸಭೆ ನಡೆಯಿತು.

Spread the love

Leave a Reply

Your email address will not be published. Required fields are marked *

error: Content is protected !!