ಯರಗಲ್ ಗ್ರಾಮದ ಅಂಬಿಗರ ಚೌಡಯ್ಯ ವೃತ್ತದಲ್ಲಿನ ಬ್ಯಾನರ್ ಹರಿದು ಅವಮಾನ, ಕೋಲಿ ಸಮಾಜ ಖಂಡನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಯರಗಲ್ ಗ್ರಾಮದ ಅಂಬಿಗರ ಚೌಡಯ್ಯ ವೃತ್ತದಲ್ಲಿ ನಿಜಶರಣ ಅಂಬಿಗರ ಚೌಡಯ್ಯ, ವಿಠಲ್ ಹೇರೂರು ಹಾಗೂ ಮಾತಾ ಮಾಣಿಕೇಶ್ವರಿ ಭಾವಚಿತ್ರ ಇರುವ ಬ್ಯಾನರ್ ಹರಿದು ವಿಠಲ್ ಹೇರೂರು ಅವರ ಚಿತ್ರ ವಿರೂಪಗೊಳಿಸಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಗುರುವಾರ ಬೆಳಗ್ಗೆ ವಿಷಯ ತಿಳಿಯುತ್ತಿದ್ದಂತೆಯೇ ಕೋಲಿ ಸಮಾಜದ ಮುಖಂಡರು ಜಮಾಯಿಸಿ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ ಈ ಸಂದರ್ಭದಲ್ಲಿ ಪಿಎಸ್ಐ ಶ್ರೀಶೈಲ್ ಅಂಬಾಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

