ರೈತರು ಯಶಸ್ವಿನಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು: ರೇವಣಸಿದ್ದ ಬಡಾ ಕರೆ
ನಾಗಾವಿ ಎಕ್ಸಪ್ರೆಸ್
ಕಾಳಗಿ: ಯಶಸ್ವಿನಿ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು ಪ್ರತಿಯೊಬ್ಬ ರೈತರು ಕಾರ್ಡ್ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕು ಎಂದು ರಟಕಲ್ ಪಿಕೆಪಿಎಸ್ ಅಧ್ಯಕ್ಷ ರೇವಣಸಿದ್ದ ಬಡಾ ಕರೆ ನೀಡಿದರು.
ತಾಲೂಕಿನ ರಟಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆ ಅಡಿಯಲ್ಲಿ 2025-26ನೇ ಸಾಲಿಗೆ ಯಶಸ್ವಿನಿ ಯೋಜನೆಯ ನೋಂದಣಿ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆಯಡಿ ಸಾವಿರಕ್ಕೂ ಹೆಚ್ಚು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದು ರಾಜ್ಯದ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಲಭಿಸಲಿದೆ. ಇನ್ನೂ ಹಲವು ಆಸ್ಪತ್ರೆಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳುತ್ತಿವೆ. ಈ ಯೋಜನೆಯಲ್ಲಿ ಯಶಸ್ವಿನಿ ಸದಸ್ಯರಾದರೆ ಅವರ ಕುಟುಂಬದ ನಾಲ್ವರಿಗೆ ಯೋಜನೆಯಡಿ ಸೌಲಭ್ಯ ದೊರೆಯಲಿದೆ ಎಂದು ಮಾಹಿತಿ ನೀಡಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಸರ್ಕಾರವು ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಇದೇ ಜ.3 ರಿಂದ ನೊಂದಣಿ ಆರಂಭಗೊಂಡಿದೆ ಮಾ.31 ಕೊನೆ ದಿನವಾಗಿದೆ ಎಂದು ತಿಳಿಸಿದರು.
ಯಶಸ್ವಿನಿ ಕಾರ್ಡ್ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಒಂದು ಮಹತ್ವದ ಆರೋಗ್ಯ ಭದ್ರತಾ ಯೋಜನೆಯಾಗಿದೆ. ಅಲ್ಪ ಶುಲ್ಕದಲ್ಲಿ ದೊಡ್ಡ ಮಟ್ಟದ ಚಿಕಿತ್ಸೆ ಪಡೆಯುವ ಈ ಅವಕಾಶವನ್ನು ಅರ್ಹರು ತಪ್ಪದೇ ಬಳಸಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ನೋಂದಣಿ ಮಾಡಿಕೊಂಡು ನಿಮ್ಮ ಕುಟುಂಬದ ಆರೋಗ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕಾಶೀನಾಥ್ ಚೌಕ, ನಿರ್ದೇಶಕರುಗಳಾದ ತರುಣಶೇಖರ್ ಬಿರಾದಾರ್, ಗುಂಡಯ್ಯ ಸ್ವಾಮಿ ಮಠಪತಿ, ಮಲ್ಲಿಕಾರ್ಜುನ್ ಬುಳ್ಳಾ, ಚಂದ್ರಕಾಂತ್ ಸಿಗಿ, ರೇವಣ ಕುಮಾರ್ ಏರಿ, ಕಮಲಾಬಾಯಿ ಚೇಂಗಟಿ ಇದ್ದರು.

