ಚಿತ್ತಾಪುರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಚಿತ್ತಾಪುರ ಪಟ್ಟಣದ ವಾರ್ಡ್ ನಂ.12 ರಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಪಾಶಾಮಿಯ್ಯಾ ಖುರೇಷಿ ಚಾಲನೆ ನೀಡಿದರು.
ಕ್ಷೇತ್ರದ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅನುದಾನದಲ್ಲಿ ಮತ್ತು ಅವರ ಇಚ್ಛಾಶಕ್ತಿಯಿಂದ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ತೀವ್ರ ಗತಿಯಲ್ಲಿ ನಡೆಯುತ್ತಿವೆ ಎಂದು ಖುರೇಷಿ ಹೇಳಿದರು.
ಪುರಸಭೆ ವ್ಯಾಪ್ತಿಯ ಎಲ್ಲ 23 ವಾರ್ಡ್ ಗಳಲ್ಲಿ ರಸ್ತೆ, ಚರಂಡಿ, ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ, ಸಚಿವ ಪ್ರಿಯಾಂಕ್ ಖರ್ಗೆ ಅವರ ಮುತುವರ್ಜಿಯಿಂದ ಹೊಸ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು.
ಈ ಸಂದರ್ಭದಲ್ಲಿ ಗುತ್ತಿಗೆದಾರ ದೇವರಾಜ್ ವಾರದ್, ಪುರಸಭೆ ಸಹಾಯಕ ಇಂಜಿನಿಯರ್ ರಾಕೇಶ್ ರೆಡ್ಡಿ, ಅಬ್ದುಲ್ ಗಫೂರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.